Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...

ಡಿಗ್ರಿ ಪರೀಕ್ಷೆ ಯಾವಾಗ ನಡೆಸಲು ನಿರ್ಧರಿಸಿದೆ? ಯೂನಿವರ್ಸಿಟಿ ನಿರ್ಧಾರ ಏನು? ಉನ್ನತ ಶಿಕ್ಷಣ ಸಚಿವರು ಏನು ಹೇಳ್ತಾರೆ? new

ಡಿಗ್ರಿ ಪರೀಕ್ಷೆ ಯಾವಾಗ ನಡೆಸಲು ನಿರ್ಧರಿಸಿದೆ?  ಯೂನಿವರ್ಸಿಟಿ ನಿರ್ಧಾರ ಏನು? ಉನ್ನತ ಶಿಕ್ಷಣ ಸಚಿವರು ಏನು ಹೇಳ್ತಾರೆ?





ದೇಶಾದ್ಯಂತ ಕೊರೋನಾ ಸೋಂಕಿನ ಹಾವಳಿ ಹೆಚ್ಚಾಗಿದು ಹತೋಟಿಗೆ ಬರದೇ ಇರುವ ಕಾರಣ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.


ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥನಾರಾಯಣ, ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ 16 ಏಪ್ರಿಲ್ ವಿಡಿಯೋ ಕಾನ್ಫರೆನ್ಸ್ ಮಾಡಿದ್ದೂ ಪರೀಕ್ಷೆ ಬಗ್ಗೆ ಚರ್ಚಿಸಲಾಗಿದೆ.

ಚರ್ಚಿಸಿದ ವಿಷಯಗಳು.
1) ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಪಾಠ ಪ್ರವಚನಗಳು ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಪರೀಕ್ಷೆ ಯಾವಾಗ ಮತ್ತು ಹೇಗೆ ನಡೆಸಬೇಕು?
2) ತರಗತಿಗಳು ಆರಂಭವಾದ ನಂತರ ಪರೀಕ್ಷೆ ತಡವಾಗಿ ನಡೆಸಬೇಕಾ?
3) ಪ್ರಾಯೋಗಿಕ ಪರೀಕ್ಷೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
4) ಆಂತರಿಕ ಅಂಕಗಳನ್ನು ಆದರಿಸಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶವನ್ನು ನಿರ್ಧರಿಸುವ ಬಗ್ಗೆ ಚಿಂತನೆ ನಡೆದಿದೆ.

ಸಚಿವರು ಎಲ್ಲ ಕುಲಪತಿಗಳಿಗೆ ಹಿಂದಿನ ಫಲಿತಾಂಶಗಳನ್ನು ಕೂಡಲೇ ಪ್ರಕಟಿಸುವಂತೆ ಸೂಚಿಸದ್ದಾರೆ.

ಸಚಿವರು ಎಲ್ಲಾ ಕುಲಪತಿಗಳಿಂದ ತಮ್ಮ ಅಭಿಪ್ರಾಯ ತಿಳಿಸಿ ಅಂತಾ ಹೇಳಿದ್ದಾರೆ.
5) ವಿದ್ಯಾರ್ಥಿಗಳಿಗೆ ಯೌಟ್ಯೂಬ್ ಮೂಲಕ ಪಾಠ :
ಲಾಕ್ ಡೌನ್ ನಿಂದ ಕಲಿಕೆಗೆ ಅಡ್ಡಿವಾಗಬಾರದು ಎಂಬ ಹಿನ್ನಲೆಯಲ್ಲಿ ಆನ್ಲೈನ್ ತರಗತಿಗಳನ್ನು ಮುಂದುವರೆಸಬೇಕು ಎಂದು ಸೂಚಿಸಲಾಗಿದೆ.

6) ರಾಷ್ಟೀಯ ಶಿಕ್ಷಣ ನೀತಿಯನ್ನು ಈಗ ಅಥವಾ ನಂತರ ದಿನಗಳಲ್ಲಿ ಅನುಷ್ಠಾನಗೊಳಿಸಬೇಕೆ ಎಂಬ ಬಗ್ಗೆಯೂ ಪರಿಶೀಲಿಸಿ ಸಲಹೆ ನೀಡಲು ಸಮಿತಿಗಳನ್ನು ರಚಿಸಲಾಗಿದೆ.

ಕೇಂದ್ರ ಸರ್ಕಾರದ 'ಸ್ವಯಂ ಅಪ್ಲಿಕೇಶನ್ ' ಮೂಲಕವೂ ಆನ್ಲೈನ್ ಪಾಠ ಮುಂದುವರೆಸಿ ಅಂತಾ ಹೇಳದ್ದಾರೆ.

ಇದಲ್ಲದೆ ಯೂನಿವರ್ಸಿಟಿ ಗಳು ಹಾಗೂ ಉನ್ನತ ಆಯುಕ್ತಾಲಯ ಯೌಟ್ಯೂಬ್ ನಲ್ಲಿ ಪಾಠಗಳನ್ನು ಅಪ್ಲೋಡ್ ಮಾಡಿದೆ ಅದರ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದು ಕೊಳ್ಳಬಹುದು.

ಯೌಟ್ಯೂಬ್ ಚಾನೆಲ್ ಹೆಸರು " ವಿಜಯೀಭವ ಮತ್ತು ಜ್ಞಾನ ನಿಧಿ '.

ಮುಂದಿನ ಶೈಕ್ಷಣಿಕ ವರ್ಷ ದಿಂದ ಹೊಸ ರಾಷ್ಟೀಯ ಶಿಕ್ಷಣ ನೀತಿ ಜಾರಿಗೆ ಗೊಳಲಿದ್ದು, ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಪಠ್ಯಕ್ರಮ, ಬೋಧನಾ ವಿಧಾನ ಬದಲಾವಣೆಗೆ ಚಿಂತನೆ ನಡೆಸಿದೆ.


ಡಿಗ್ರಿ ಪರೀಕ್ಷೆ ಗಳ ಬಗ್ಗೆ ಜೂನ್ ವೇಳೆಗೆ ನಡೆಸಲು ಚಿಂತನೆ ನಡೆಸಲಾಗಿದ್ದು, ಪರಿಸ್ಥಿತಿ ನೋಡಿಕೊಂಡು ಈ ಸಂಬಂಧ ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಸಚಿವರು ತಿಳಿಸಿದ್ದಾರೆ.






ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)