Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...

SSLC ವಿದ್ಯಾರ್ಥಿಗಳಿಗೆ ಮಾರ್ಗಸೂಚಿ |ತಪ್ಪದೆ ನಿಯಮಗಳನ್ನು ಪಾಲಿಸಿ. |ಕರ್ನಾಟಕ SSLC ಪರೀಕ್ಷೆ ಮಾರ್ಗಸೂಚಿ

SSLC ವಿದ್ಯಾರ್ಥಿಗಳಿಗೆ ಮಾರ್ಗಸೂಚಿ |ತಪ್ಪದೆ ನಿಯಮಗಳನ್ನು ಪಾಲಿಸಿ


ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ದಲ್ಲಿ SSLC ಪರೀಕ್ಷೆ ರದ್ದು ಮಾಡಲಾಗಿದ್ದು, ಕರ್ನಾಟಕ ದಲ್ಲಿ ಪರೀಕ್ಷೆ ಯನ್ನು ಮುನ್ನೆಚ್ಚರಿಕೆ ಕ್ರಮಗಳೊಂದಿಗ್ದೇ

ಕೊರೋನಾ ಭೀತಿ ಹಿನ್ನೆಲೆಯಲ್ಲಿ ವಿರೋಧದ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಿದ್ಧತೆಗಳನ್ನ ಮಾಡಿಕೊಂಡಿದೆ.

ಇದೇ ಜೂನ್ 25ರಿಂದ ಜುಲೈ 3ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಇದಕ್ಕೆ ಸಂಬಂಧಿಸಿಂದತೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಕೆಲ ಮಾರ್ಗಸೂಚಿಗಳನ್ನ ಪ್ರಕಟಿಸಿದೆ.

ವಿದ್ಯಾರ್ಥಿಗಳ ಸುರಕ್ಷತೆಗಾಗಿ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದ್ದು, ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಶಿಕ್ಷಣ ಇಲಾಖೆ ತಿಳಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಗೈಡ್‌ಲೈನ್ ಈ ಕೆಳಗಿನಂತಿವೆ ನೋಡಿ.

ಗೈಡ್‌ಲೈನ್ಸ್‌

*ಪ್ರತಿ ವಿದ್ಯಾರ್ಥಿಗಳಿಗೂ ಆರೋಗ್ಯ ತಪಾಸಣೆ ಕಡ್ಡಾಯ
* ಪರೀಕ್ಷೆ ನಡೆಯುವ ಒಂದುವರೆ ಗಂಟೆ ಮೊದಲೇ ವಿದ್ಯಾರ್ಥಿಗಳು ಹಾಜರಾಗಬೇಕು
* ಆರೋಗ್ಯ ತಪಾಸಣೆಗೂ ಮುನ್ನ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು. ipt>
* ವಿದ್ಯಾರ್ಥಿಗಳು ಮಾಸ್ಕ್ ಮರೆತು ಬಂದ್ರೆ ತಪಾಸಣಾ ಕೇಂದ್ರದಲ್ಲೇ ಮಾಸ್ಕ್‌ ನೀಡಬೇಕು.
* ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರ ಉಪಯೋಗಿಸುವುದು ಕಡ್ಡಾಯ
* ಬೇರೆ ವಿದ್ಯಾರ್ಥಿಗಳನ್ನ ಅಪ್ಪಿಕೊಳ್ಳುವುದು, ಥ್ಯಾಂಕ್ಸ್ ಕೊಡುವುದು ಮುಟ್ಟುವುದು ಮತ್ತು ಉಗುಳುವುದನ್ನ ಮಾಡಬಾರದು.
* ಕಿಟಕಿ, ಬಾಗಿಲು ಮತ್ತು ಇತರೆ ವಸ್ತುಗಳನ್ನು ಅನಗತ್ಯವಾಗಿ ಮುಟ್ಟಬಾರದು
* ಪರೀಕ್ಷೆ ಬರೆಯುವಾಗ ಅನಾರೋಗ್ಯ ಕಂಡು ಬಂದರೆ ಮೇಲ್ವಿಚಾರಕರಿಗೆ ತಿಳಿಸಬೇಕು.
* ಪರೀಕ್ಷೆ ಕೇಂದ್ರ ಪ್ರವೇಶಿಸುವಾಗ, ಹೊರ ಹೋಗುವಾಗ ದೈಹಿಕ ಅಂತರ ಕಾಪಾಡಿಕೊಳ್ಳಬೇಕು.

ಶಿಕ್ಷಣ ಇಲಾಖೆ ಮೇಲೆ ತಿಳಿಸಲಾಗಿರುವ ಅಂಶಗಳನ್ನ ವಿದ್ಯಾರ್ಥಿಗಳು ಪಾಲಿಸಬೇಕು. ಮತ್ತು ಈ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಸಹ ಗಮನಿಸಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)