Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಮಾರ್ಗಶುಚಿ ಬಿಡುಗಡೆ|ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ.

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಲ್ಲಿ ಕೋವಿಡ್-19 ಸೋಂಕು ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಶಿಕ್ಷಣ ಇಲಾಖೆ ( Education Department ) ಬಿಡುಗಡೆ ಮಾಡಿದೆ.

ಅಲ್ಲದೇ ಕಡ್ಡಾಯವಾಗಿ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ( School Education Department ) ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2022-23ನೇ ಶೈಕ್ಷಣಿಕ ವರ್ಷವನ್ನು ದಿನಾಂಕ 16-05-2022ರಿಂದ ಪ್ರಾರಂಭಿಸಿದ್ದು, ಒಂದು ವೇಳೆ ಕೋವಿಡ್-19ರ ಪ್ರತಿಕೂಲ ಸನ್ನಿವೇಶ ಉಂಟಾದಲ್ಲಿ, ಶೈಕ್ಷಣಿಕ ಚಟುವಟಿಕೆಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಮುಂದುವರೆಸುವುದರೊಂದಿಗೆ ವಿದ್ಯಾರ್ಥಿಗಳು ಕಲಿಕೆಯನ್ನು ಹಿಂದುಳಿದಂಯೆತೆ ಕ್ರಮವಹಿಸಲು ತಿಳಿಸಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಕೋವಿಡ್-19 ಸೋಂಕು ಹರಡದಂತೆ ಈ ಕೆಳಕಂಡ ಮುನ್ನಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಹಾಗೂ ಕೋವಿಡ್-19ರ ಸುರಕ್ಷತಾ ಕ್ರಮಗಳನ್ನು, ಪ್ರಾಮಾಣಿತ ಕಾರ್ಯಾಕರಣೆ ವಿಧಾನ ( Standard Operation Procedure - SOP )ಯನ್ನು ಅನುಸರಿಸಿ, ರಾಜ್ಯದ ಶಾಲೆಗಳನ್ನು ನಡೆಸಲು ಅಗತ್ಯ ಕ್ರಮಗಳನ್ನು ವಹಿಸುವಂತೆ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು, ಶೈಕ್ಷಣಿಕ ಉಸ್ತುವಾರಿ ಅಧಿಕಾರಿ, ಸಿಬ್ಬಂದಿಗಳಿಗೆ ತಿಳಿಸಿದೆ.

ರಾಜ್ಯದ ಶಾಲೆಗಳಲ್ಲಿ ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳು

ಕೋವಿಡ್ ನಿಯಂತ್ರಣದ ಬಗ್ಗೆ ಮಕ್ಕಳ ಪೋಷಕರಿಗೆ, ಎಲ್ಲಾ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸುವುದು.
ಎಲ್ಲಾ ಶಿಕ್ಷಕರು, ಮುಖ್ಯ ಶಿಕ್ಷಕರು ಪ್ರತಿ ದಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಬಗ್ಗೆ ಅಗತ್ಯ ಅರಿವು ಮೂಡಿಸುವುದು
ವಿದ್ಯಾರ್ಥಿಗಳು ಮನೆಯಿಂದಲೇ ಶುದ್ಧ ಬಿಸಿನೀರನ್ನು ತರುವಂತೆ ಸೂಚಿಸುವುದು
12-14 ವರ್ಷದ ಎಲ್ಲಾ ವಿದ್ಯಾರ್ಥಿಗಳು ಕೋವಿಡ್-19ರ ಲಸಿಕೆಯನ್ನು ಪಡೆದಿರುವ ಬಗ್ಗೆ ಪರಿಶೀಲಿಸುವುದು. ಪಡೆಯದೇ ಇದ್ದಲ್ಲೀ, ಆ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಕೊಡಿಸುವುದು
ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳಿದ್ದರೇ, ಆ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸ್ಥಳೀಯ ಆಸ್ಪತ್ರೆಗಳಲ್ಲಿ ಪೋಷಕರ ಉಪಸ್ಥಿತಿಯಲ್ಲಿ ತಪಾಸಣೆಗೆ ಒಳಪಡಿಸುವುದು
ಕೋವಿಡ್ ಲಕ್ಷಣವಿರುವಂತ ವಿದ್ಯಾರ್ಥಿಯನ್ನು ತಾತ್ಕಾಲಿಕವಾಗಿ ಕೆಲವು ದಿನಗಳಿಗೆ ಮಾತ್ರ ಭೌತಿಕ ತರಗತಿಗಳಿಗೆ ಹಾಜರಾಗದಂತೆ ತಿಳಿಸುದುವು.
ಯಾವುದಾದರೂ ಶಾಲೆಯಲ್ಲಿ ತರಗತಿವಾರು 10ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಕೋವಿಡ್-19ರ ಲಕ್ಷಣಗಳು ಕಂಡು ಬಂದಲ್ಲಿ, ಸೋಂಕು ದೃಢಪಟ್ಟಲ್ಲಿ, ಕೂಡಲೇ ಅಂತಹ ಶಾಲಾ ಮುಖ್ಯೋಪಾಧ್ಯಾಯರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಮಾಧಿಕಾರಿಗಳ ಹಾಗೂ ಜಿಲ್ಲಾ ಉಪನಿರ್ದೇಶಕರ ಪೂರ್ವಾನುಮತಿ ಪಡೆದು, ಶಾಲೆಗೆ ಎರಡು, ಮೂರು ದಿನಗಳಿಗೆ ರಜೆಯನ್ನು ಘೋಷಿಸುವುದು. ಆರೋಗ್ಯ ಇಲಾಖೆಯ ಸ್ಥಳೀಯ ಘಟಕ, ಜಿಲ್ಲಾಡಳಿತದ ಮಾರ್ಗದರ್ಶನದ, ಸಹಕಾರದೊಂದಿಗೆ ಸಂಪೂರ್ಣ ಶಾಲಾ ಕಟ್ಟಡವನ್ನು ಸ್ಯಾನಿಟೈಸ್ ಮಾಡಿಸುವುದು.
ಶಾಲೆಗಳಲ್ಲಿ ಶಿಕ್ಷಕರು ಮುಖ್ಯ ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ ಮುಖ ಗವಸನ್ನು(ಮಾಸ್ಕ್) ಧರಿಸಿರತಕ್ಕದ್ದು. ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. 50 ವರ್ಷ ಮೇಲ್ಪಟ್ಟವರು ಮತ್ತು ಪೂರ್ವಭಾವಿ ಆರೋಗ್ಯ ಲಕ್ಷಣಗಳನ್ನು ( Premorbid Health Conditions ) ಹೊಂದಿರುವವರು ಅಗತ್ಯಾನುಸಾರ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ವಹಿಸತಕ್ಕದ್ದು.
ಕೋವಿಡ್-19ರ ಸುರಕ್ಷತಾ, ಮುನ್ನಚ್ಚರಿಕೆ ಕ್ರಮಗಳು ವಹಿಸಿ ಶಾಲೆ ನಡೆಸುವ ಕುರಿತು ನಿಗದಿ ಪಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದಂತೆ ( Standard Operating Procedure - SOP ) ಶಿಕ್ಷಕರು, ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಕಾಲಕಾಲಕ್ಕೆ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತ ನೀಡುವ ಕೋವಿಡ್-19ರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ, ಸ್ಥಳೀಯ ಆರೋಗ್ಯ ಇಲಾಖೆ, ಸಂಸ್ಥೆಗಳ ಮತ್ತು ತಾಲೂಕು, ಜಿಲ್ಲಾಡಳಿತಗಳ ಸಹಕಾರದೊಂದಿಗೆ ಅಗತ್ಯ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಖಡಕ್ ಆಗಿ ಸೂಚಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)