Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ

Karnataka CET result date? KEA confirmed regarding KCET 2024 result

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇದೀಗ ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಬೇಕಿದೆ, ಇದರ ಮಧ್ಯೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರಿಸಲ್ಟ್​ ಬಗ್ಗೆ ಹರಿದಾಡುತ್ತಿರುವ ಸುದ್ದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟನೆ ನೀಡಿದ್ದಾರೆ.

ಹಾಗಾದ್ರೆ, ಸಿಇಟಿ ಪರೀಕ್ಷೆ ರಿಸಲ್ಟ್ ಯಾವಾಗ? ಎನ್ನುವ ಬಗ್ಗೆ ಸ್ಪಷ್ಟನೆ ನಿಡಿದ್ದಾರೆ. 

ಬೆಂಗಳೂರು, (ಮೇ 20): ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಇದೀಗ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ) ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಈ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರತಿಕ್ರಿಯಿಸಿದ್ದು, ದ್ವಿತೀಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು (Karnataka CET Result) ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಇಂದು ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಇದರ ಬೆನ್ನಲ್ಲೇ ರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರತಿಕ್ರಿಯಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಸತ್ಯಕ್ಕೆ ದೂರವಾದುದು. ದ್ವಿತೀಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.
ಜೆಕೆವಿಕೆಯ ಪ್ರಾಯೋಗಿಕ ಪರೀಕ್ಷೆ ಮೇ 25ರಂದು ನಡೆಯಲಿದ್ದು, ಫಲಿತಾಂಶ ಮೇ 30ರಂದು ಪ್ರಕಟವಾಗಲಿದೆ. ಇನ್ನು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ ಮೇ 30ರಂದು ಪ್ರಕಟವಾಗುವ ಸಾಧ್ಯತೆಗಳಿವೆ. ಇದಾದ ಬಳಿಕ ಸಿಇಟಿ ರಿಸಲ್ಟ್​ ಪ್ರಕಟವಾಗಲಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಆದರೆ, ಅಧಿಕಾರಿಗಳ ಎಡವಟ್ಟಿನಿಂದ ಫಲಿತಾಂಶ ವಿಳಂಬವಾಗಿದೆ ಎಂಬ ದೂರುಗಳೂ ಕೇಳಿ ಬರುತ್ತಿವೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)