Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...

ನೀಟ್ ವಿದ್ಯಾರ್ಥಿಗಳ ಗಮನಕ್ಕೆ | ನೀಟ್ 2024 | MBBS 2024 re exam

*ನೀಟ್-2024ರ ವಿದ್ಯಾರ್ಥಿಗಳ ಮತ್ತು ಪೋಷಕರ ಆದ್ಯ ಗಮನಕ್ಕೆ*
 ಇಂದು ಮಾನ್ಯ ಸುಪ್ರೀಂಕೋರ್ಟ್ ನಲ್ಲಿ ನಡೆದ ಯುಜಿ ನೀಟ್ ಪಿ.ಎಲ್.ಐ ವಿಚಾರಣೆಯ ಸಂದರ್ಭದಲ್ಲಿ ಮೇ 5ರಂದು ಪ್ರಶ್ನೆಪತ್ರಿಕೆ ವಿತರಣೆಯ ಸಮಯ ವಿಳಂಬದಿಂದ ಹಲವು ವಿದ್ಯಾರ್ಥಿಗಳಿಗೆ (ಅಂದಾಜು 1563) ನೀಡಲಾಗಿದ್ದ ಗ್ರೇಸ್ ಅಂಕಗಳನ್ನು ರದ್ದುಪಡಿಸಿ, ಆ ವಿದ್ಯಾರ್ಥಿಗಳಿಗೆ ದಿನಾಂಕ 23-06-2024ರಂದು ಮರುಪರೀಕ್ಷೆ ನಡೆಸಲಾಗುವುದು ಎಂದು ಮತ್ತು ಫಲಿತಾಂಶವನ್ನು ದಿನಾಂಕ 30-06-2024ರಂದು ಪ್ರಕಟಿಸಲಾಗುವುದು ಎಂದು NTA ತಿಳಿಸಿರುತ್ತದೆ. *ಮರುಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಯಿಂದ ಎಲ್ಲಾ ವಿದ್ಯಾರ್ಥಿಗಳ ಆಲ್ ಇಂಡಿಯ ರ್ಯಾಂಕ್ ಮತ್ತೊಮ್ಮ ಬದಲಾವಣೆಯಾಗುವ ಸಂಭವವಿರುತ್ತದೆ.* ಕೌನ್ಸಿಲಿಂಗ್ ಪ್ರಕ್ರಿಯೆ ಜುಲೈ 10ನೇ ತಾರೀಖಿನ ನಂತರ ಪ್ರಾರಂಭವಾಗಬಹುದು ಕಾರಣ ದಿನಾಂಕ: 08-07-2024ರಂದು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರೆ PIL ದೂರಗಳ ಬಗ್ಗೆ ವಿಚಾರಣೆಯಿರುತ್ತದೆ. ಒಂದು ಪಕ್ಷ ಪ್ರಶ್ನೆಪತ್ರಿಕೆ ಸೋರಿಕೆ ದೃಡಪಟ್ಟಲ್ಲಿ ಮುಂದಿನ ಬೆಳವಣಿಗೆಯು ಕಷ್ಟಕರವಾಗಬಹುದು.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)