Featured Post
CET ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ|KEA KCET 2023 Exam day instructions
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಕೆಇಎ ನಡೆಸುವ 2023 ರ ಸಿಇಟಿ ಮೇ. 20 ರಿಂದ 22 ರವರೆಗೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 1.40 ಲಕ್ಷ ಬಾಲಕಿಯರು ಮತ್ತು 1.21 ಲಕ್ಷ ಬಾಲಕರು ಹಾಗೂ 8 ಮಂದಿ ತೃತೀಯ ಲಿಂಗಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ http:kea.kar.nic.in ವಿದ್ಯಾರ್ಥಿಗಳು ವೆಬ್ ಸೈಟ್ ನೋಡಬಹುದು.
CET ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
1) ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟಾçನಿಕ್ ಉಪಕರಣಗಳನ್ನು ತರುವಂತಿಲ್ಲ.
2) ತುಂಬು ತೋಳಿನ ಶರ್ಟ್ ಧರಿಸುವಂತಿಲ್ಲ
3) ವಿದ್ಯಾರ್ಥಿಗಳು ಆಭರಣಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ
4) ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರಬೇಕು.
5) ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೆವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರಬೇಕು.
6) ಕ್ಯಾಲ್ಕುಲೇಟರ್ ಅಥವಾ ಲಾಗ್ ಟೇಬಲ್ಗಳನ್ನು ಪರೀಕ್ಷಾ ಸಮಯದಲ್ಲಿ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.
7 ) ಹಾಗೆಯೇ ಪರೀಕ್ಷಾ ಕೊಠಡಿ ಒಳಗೆ ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು(ಮೊಬೈಲ್ ಪೋನ್, ಬ್ಲೂ ಟೂತ್, ಸ್ಲೈಡ್ ರೂಲ್ಸ್, ಕ್ಯಾಲ್ಕುಲೇಟರ್, ವೈಟ್ ಪ್ಲೂಯಿಡ್, ವೈಯರ್ ಲೆಸ್ ಸೆಟ್ಸ್ ಮತ್ತಿತರ) ನಿಷೇಧಿಸಲಾಗಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವನ್ನು ನಿಯೋಜಿಸದಂತೆ ಸೂಚನೆ ನೀಡಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ